ಬೆಂಗಳೂರು : ಬೆಂಗಳೂರಿನ ಅಮೃತ್ ಹಳ್ಳಿಯ ಜೈನ್ ಶಾಲೆಯ ಬೆನ್ನಲ್ಲೇ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಬಳಿಯ ಖಾಸಗಿ ಶಾಲೆಯಾದ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇ ಮೇಲ್ ಮೂಲಕ ಶಾಲೆಯ ಆಡಳಿತ ಮಂಡಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಈಡಿಪೈ ಶಾಲಾ ಸಿಬ್ಬಂದಿಯನ್ನು ಹೊರ ಕಳಸಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಹುಸಿಬಾಂಬ್ ಕರೆಯಾದ್ರೂ ಶ್ವಾನದಳ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದಕ್ಕೂ ಮುನ್ನ ಬೆಂಗಳೂರಿನ ಜೈನ್ ಹರಿಟೇಜ್ ಶಾಲೆಗೆ ದುಷ್ಕರ್ಮಿಗಳು ಮಧ್ಯರಾತ್ರಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾರೆ. ಹೀಗಾಗಿ ಶಾಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಸದ್ಯ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ. ಪರಿಶೀಲನೆಯಲ್ಲಿ ಇದೊಂದು ಹುಸಿ ಬಾಂಬ್ ಮೇಲ್ ಎನ್ನುವುದು ಧೃಢವಾಗಿದೆ.