ಬೆಂಗಳೂರು : ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಕರೆ ಬರುತ್ತಿರುವ ಬೆಳವಣಿಗೆಗಳ ನಡುವೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರ ಮಧ್ಯ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಡ ಬಾಂಬ್ ಬೆದರಿಕೆ ಕರೆ ಬಂದಿದೆ
ಹೌದು ಟ್ವೀಟ್ ಮೂಲಕ ಕೆಂಪೇಗೌಡ ಏರ್ಪೋರ್ಟ್ಗೆ ಬೆದರಿಕೆ ಹಾಕಿದ ಸಂದೇಶ ಬಂದಿದೆ. ಕಮಾಂಡ ಸೆಂಟರ್ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಆರು ವಿಮಾನಗಳಲ್ಲಿ 12 ಡಾಂಬರ್ ಗಳಿದ್ದಾರೆಂದು ಟ್ವೀಟ್ ಮಾಡಲಾಗಿದೆ.
ಪ್ರತಿಯೊಂದು ವಿಮಾನದಲ್ಲಿ ಇಬ್ಬರು ಬಾಂಬರ್ ಗಳಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅನಾಮಧಯ ಟ್ವಿಟರ್ ಖಾತೆಯಿಂದ ಈ ಒಂದು ಸಂದೇಶ ಬಂದಿದೆ. ಮಂಗಳೂರು-ದುಬೈ ತಿರುವನಂತಪುರಂ-ಮಾಸ್ಕಟ್ ಸೇರಿದಂತೆ ವಿವಿಧ ವಿಮಾನಗಳಲ್ಲಿ ತೆರಳುವ ವಿಮಾನಗಳಲ್ಲಿ ಬಾಂಬರ್ ಗಳಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿದು ಬಂದಿದೆ.
ಬೆಳಗಾವಿ ಏರ್ ಪೋರ್ಟ್ ಗು ಬೆದರಿಕೆ ಕರೆ
ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ ಈಗಾಗಲೇ ಹಲವು ಬಾರಿ ಬಾಂಬ್ ಬೆದರಿಕೆ ಕರೆ ಬಂದಿವೆ. ಅದರಂತೆ ಇಂದು ಅಪರಿಚಚಿತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದು, ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ ರವಾನಿಸಲಾಗಿದೆ.
ತ್ಯಾಗರಾಜ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಶ್ವಾನ ದಳ, ಬಾಂಬ್ ಸ್ಕ್ವಾಡ್ ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ.