ಬೆಂಗಳೂರು : ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆತ್ಮಾಹುತಿ ಬಾಂಬ್ ದಾಳಿ ಮಾಡುವುದಾಗಿ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಸಂದೇಶ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಟ್ರಿಯ ದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.