ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮೂರು ಸ್ಟಾರ್ ಹೋಟೆಲ್ ಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕಸ್ ಸಿಟಿಯಲ್ಲಿರುವ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ನಿಮ್ಮ ಹೋಟೆಲ್ ಬಾಂಬ್ ನಿಂದ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಬೆಳಗ್ಗೆ ಹೋಟೆಲ್ ಸಿಬ್ಬಂದಿಗಳು ಇ-ಮೇಲ್ ಪರಿಶೀಲನೆ ನಡೆಸಿದ ವೇಳೆ ಬೆದರಿಕೆ ಇ-ಮೇಲ್ ನೋಡಿದ್ದಾರೆ. ಗಾಬರಿಗೊಂಡ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೋಟೆಲ್ ಗೆ ಬಾಂಬ್ ಸ್ಕ್ವಾಡ್ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಬಾಂಬ್ ಸ್ಕ್ವಾಡ್ ಗಳು ಹೋಟೆಲ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.