ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದೀಗ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಆತ್ಮಹತ್ಯೆ ಬಾಂಬರ್ ಮೂಲಕ ದಾಳಿ ಮಾಡುವುದಾಗಿ ಈ ಮೇಲ್ ಸಂದೇಶ ಬಂದಿದೆ ಕೆಂಪೇಗೌಡ ಏರ್ಪೋರ್ಟ್ ಆಡಳಿತ ಮಂಡಳಿ ಇ-ಮೇಲ್ ಐಡಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದೆ.
ಮೂರು RDX, IED ಬಳಸಿ ಟರ್ಮಿನಲ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. gaina_remesh@outlook.com ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ಸಂದೇಶ ಬಂದ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ವೇಳೆ ಯಾವುದೇ ಸ್ಪೋಟಕ ವಸ್ತು ಪತ್ತೆ ಆಗಿಲ್ಲ .
ಹುಸಿ ಬಾಂಬ್ ಸಂದೇಶ ಎಂದು ಪೊಲೀಸರಿಗೆ ಸಿಬ್ಬಂದಿಗಳು ದೂರು ನೀಡಿದ್ದಾರೆ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಜನವರಿ 16ರಂದು ಏರ್ಪೋರ್ಟ್ ಆಡಳಿತ ಮಂಡಳಿ ಈ ಮೇಲ್ ಗೆ ಈ ಒಂದು ಬೆದರಿಕೆ ಸಂದೇಶ ಬಂದಿತ್ತು.








