ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.
ಹೌದು ಬೆಂಗಳೂರಿನ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಬೆಂಗಳೂರಿನ ಬಸವ ಭವನದಲ್ಲಿರುವ ಆಯೋಗದ ಕಚೇರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದ್ದು, 14 ಸೈನೈಡ್ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಮಧ್ಯಾಹ್ನ 1 ಗಂಟೆ ಒಳಗೆ ಬಾಂಬ್ ಸ್ಪೋಟವಾಗುತ್ತೆ ಎಂದು ಬೆದರಿಸಿದ್ದಾರೆ. ಅಡ್ಮಿನಿಸ್ಟ್ರೇಷನ್ ಆಫೀಸರ್ ಈ ಕುರಿತು ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.








