ಬೆಂಗಳೂರು : ನಿನ್ನೆ ತಾನೆ ಮೈಸೂರಿನ ಜಿಲ್ಲಾ ನ್ಯಾಯಾಲಯಕ್ಕೆ, ಬೆಂಗಳೂರಿನ ಲಾಲ್ಬಾಗ್ ರಸ್ತೆಯಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಹಾಗು ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಈಗ ಇಂದು ಬೆಂಗಳೂರಿನ ಖಾಸಗಿ ಶಾಲೆಗೆ ಗಿಡಿ ಗಿಡಿಗಳು ಬಾಂಬೆ ಸಂದೇಶ ಕಳುಹಿಸಿದ್ದಾರೆ.
ಹೌದು ಬೆಂಗಳೂರಿನ ಖಾಸಗಿ ಶಾಲೆಗೆ, ಮಹಮ್ಮದ್ ಇಕ್ಬಾಲ್ ಎಂಬಾತ ನಿಂದ ಇ-ಮೇಲ್ ಸಂದೇಶ ಬೆದರಿಕೆ ಬಂದಿದ್ದು, ಶಾಲೆಯ ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎಂದು ಸಂದೇಶ ರವಾನಿಸಿದ್ದಾನೆ. ವಿಷಯ ತಿಳಿದು ತಕ್ಷಣ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








