ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕೋಲಾರ ಹೊರವಲಯದ ಟಮಕ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.
ವಿಷಯ ತಿಳಿದ ತಕ್ಷಣ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯದಳ ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ತೆರಳಿ ಶೋಧ ನಡೆಸುತ್ತಿದ್ದಾರೆ. ಇ-ಮೇಲ್ ಸಂದೇಶ ಬಂದ ತಕ್ಷಣ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








