ಬೆಂಗಳೂರು : ಇತ್ತೀಚಿಗೆ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಜಿಲ್ಲಾ ನ್ಯಾಯಾಲಯಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ದೆಹಲಿ ಪೊಲೀಸರು ಓರ್ವಣನ್ನು ಅರೆಸ್ಟ್ ಮಾಡಿದ್ದರು. ಇದೀಗ ಇಂದು ಬೆಳಿಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು.
ಹೌದು ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಇದೆ ಅಂತ ಕಿಡಿಗೇಡಿಗಳು ಬರೆದಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ ನಿಂದ ಇಂಡಿಗೋ ವಿಮಾನ ದೆಹಲಿಗೆ ತೆರಳುತ್ತಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್ಪೋರ್ಟ್ ನಲ್ಲಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ವಿಮಾನದಲ್ಲಿ ಇದ್ದ 183 ಪ್ರಯಾಣಿಕರನ್ನು ತಕ್ಷಣ ಕೆಳಗಡೆ ಇಳಿಸಿ ತಪಾಸಣೆ ನಡೆಸಲಾಯಿತು. ಈ ವೇಳೆ ಅದೊಂದು ಹುಸಿ ಬಾಂಬ್ ಸಂದೇಶ ಅಂತ ಗೊತ್ತಾದ ಮೇಲೆ ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ.








