ನವದೆಹಲಿ : ದೆಹಲಿ-ದುಬೈ ನಡುವಿನ ವಿಮಾನವನ್ನು ಸ್ಪೋಟಿಸುವುದಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದೆ.

ದೆಹಲಿ-ದುಬೈ ನಡುವಿನ ವಿಮಾನದಲ್ಲಿ ಬಾಂಬ್‌ ಇಡಲಾಗಿದ್ದು, ಅದನ್ನು ಸ್ಪೋಟಿಸಲಾಗುವುದು ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇ-ಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ.

ದುಷ್ಕರ್ಮಿಗಳ ಇ-ಮೇಲ್‌ ಬಳಿಕ ತಪಾಸಣೆ ನಡೆಸಿದ ಭದ್ರತಾ ಸಿಬ್ಬಂದಿಗಳಿಗೆ ತಪಾಸಣೆ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ವರದಿಯಾಗಿದೆ.

Share.
Exit mobile version