ಮೈಸೂರು : ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ಸಿಬ್ಬಂದಿ ದೌಡಾಯಿಸಿದ್ದಾರೆ.
ಆಂಧ್ರಪ್ರದೇಶದ ಅಪರಿಚಿತ ವ್ಯಕ್ತಿಯಿಂದ ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಮೈಸೂರು ರೈಲ್ವೆ ನಿಲ್ದಾಣದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ರೈಲ್ವೆ ಅಧಿಕಾರಿಗಳು, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ರೈಲು ನಿಲ್ದಾಣದ ಫ್ಲಾಟ್ ಫಾರಂ, ರೈಲುಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.