ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗೆ ಬಾಂಬ ಬೆದರಿಕೆ ಬಂದಿದ್ದು, ಆರ್ ಕೆ ಪುರಂನಲ್ಲಿರುವ ಡಿಪಿಎಸ್ ಶಾಲೆಗೆ ಇದೀಗ ಬೆದರಿಕೆ ಸಂದೇಶ ಬಂದಿದೆ. ಶಾಲೆಯ ಪ್ರಾಂಶುಪಾಲರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಕ್ಕಳನ್ನು ತಕ್ಷಣ ಸಿಬ್ಬಂದಿ ಶಾಲೆಯಿಂದ ಹೊರಗಡೆ ಕಳುಹಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ಆರ್‌ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಶುಕ್ರವಾರ ಬಾಂಬ್ ಬೆದರಿಕೆ ಕರೆ ಬಂದಿದೆ. ಸುಮಾರು 10 ಗಂಟೆಗೆ ಕರೆ ಸ್ವೀಕರಿಸಿದ ನಂತರ ಶಾಲೆಯ ಆವರಣದಲಿರುವ ಮಕ್ಕಳನ್ನು ಸ್ಥಳಾಂತರಿಸಲಾಯಿತು.ಬಾಂಬ್‌ನಿಂದ ಶಾಲೆಯನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಕರೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಬಾಂಬ್ ಬೆದರಿಕೆ ಸಂದೇಶ ಬಂದ ತಕ್ಷಣ ಇದೀಗ ಪೊಲೀಸರು ಶಾಲೆಗೆ ಧಾವಿಸಿ ಶಾಲಾ ಆವರಣದಲ್ಲಿರುವ ಎಲ್ಲ ಮಕ್ಕಳನ್ನು ಹಾಗೂ ಎಲ್ಲಾ ಸಿಬ್ಬಂದಿಗಳನ್ನು ತಕ್ಷಣ ಹೊರಗಡೆ ಕಳುಹಿಸಲಾಗಿದೆ. ಮೇಲ್ ಎಲ್ಲಿಂದ ಬಂತು ಯಾರು ಕಳಿಸಿದ್ದು ಎಂಬುದರ ಕುರಿತು ಇದೀಗ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಸ್ಪೈಸ್‌ಜೆಟ್ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ
ಕಳೆದ 8 ದಿನಗಳ ಹಿಂದೆ ದರ್ಭಾಂಗಾ-ದೆಹಲಿ ಸ್ಪೈಸ್‌ಜೆಟ್ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದಿತ್ತು, ಕಾರಣ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 25ರಂದು ರಾತ್ರಿ ಕಟ್ಟೆಚ್ಚರ ವಹಿಸಲಾಯಿತು. ವಿಮಾನದಲ್ಲಿದ್ದ 200ಕ್ಕೂ ಆತಂಕಕ್ಕೀಡಾದರು. ಬೆದರಿಕೆ ಸಂದೇಶ ದೊರೆತ ಬೆನ್ನಲ್ಲೇ ವಿಮಾನದಿಂದ ಪ್ರಯಾಣಿಕರನ್ನು ಇಳಿಸಿ ಸಂಪೂರ್ಣ ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಯಿತು. ನಂತರ ವಿಮಾನ ನಿಲ್ದಾಣದಲ್ಲಿ ಭದ್ರತಾ ಕಟ್ಟೆಚ್ಚರ ಘೋಷಿಸಲಾಯಿತು.
ಸ್ಪೈಸ್‌ಜೆಟ್ ವಿಮಾನದಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ನಂತರ ಶೋಧ ನಡೆಸಿದಾಗ ಅನುಮಾನಾಸ್ಪದ ಏನೂ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪರಿಗಣಿಸಲಾಯಿತು. ಬಿಹಾರದ ದರ್ಭಾಂಗಾದಿಂದ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಬುಕಿಂಗ್ ಕಚೇರಿಗೆ ಕರೆ ಬಂದಿತ್ತು ಎಂದು ಸ್ಪೈಸ್‌ಜೆಟ್ ಏರ್‌ಲೈನ್ಸ್ ತಿಳಿಸಿದೆ.
ಮುಂಬೈನಲ್ಲೂ ಬೆದರಿಕೆ ಸಂದೇಶ
ಮುಂಬೈನ ಟ್ರಾಫಿಕ್ ಪೊಲೀಸರಿಗೆ ಪಠ್ಯದ ಮೂಲಕ ಸಂದೇಶದ ಮೇಲೆ ‘ಬಾಂಬ್ ಬೆದರಿಕೆ’ ಬಂದಿದೆ, ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರಿ ನಿಯಂತ್ರಣ ಕಚೇರಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಕಂಟ್ರೋಲ್ ರೂಮ್‌ಗೆ ಅಪರಿಚಿತ ವ್ಯಕ್ತಿಯಿಂದ ಸಂದೇಶ ಬಂದಿದ್ದು, “ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಸಲಾಗಿದೆ.
ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರ ನಿಯಂತ್ರಣ ಕೊಠಡಿಗೆ ಶುಕ್ರವಾರ ಬೆಳಗ್ಗೆ ಈ ಬಾಂಬ್ ಬೆದರಿಕೆ ಬಂದಿತ್ತು. ಕಂಟ್ರೋಲ್ ರೂಮ್‌ಗೆ ಅಪರಿಚಿತ ವ್ಯಕ್ತಿಯಿಂದ “ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ” ಎಂಬ ಪಠ್ಯ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಸಂದೇಶದ ನಂತರ ಮುಂಬೈ ಪೊಲೀಸರು ಮತ್ತು ಇತರ ಏಜೆನ್ಸಿಗಳು ಅಲರ್ಟ್ ಆಗಿವೆ. ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ.ಮಾಹಿತಿ ಪಡೆದ ಮುಂಬೈ ಪೊಲೀಸರು ಸಂದೇಶ ಕಳುಹಿಸುವವರ ಬಗ್ಗೆ ಪತ್ತೆ ಹಚ್ಚಲು ಆರಂಭಿಸಿದ್ದಾರೆ. ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ.