ಬೆಳಗಾವಿ : ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದ ವೇಳೆ ಗುಡ್ಡದ ಮೇಲಿನ ಬೃಹತ್ ಬಂಡೆಗಳು ಉರುಳಿಬಿದ್ದ ಪರಿಣಾಮ ಗಣಿಗಾರಿಕೆ ಮಾಡುತ್ತಿದ್ದ ಹಲವು ಕಾರ್ಮಿಕರು ಸಿಲುಕಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಡ್ರಾಮಿ ಗ್ರಾಮದಲ್ಲಿ ನಡೆದಿದೆ.
ಹೌದು ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಸವದತ್ತಿ ತಾಲ್ಲೂಕಿನ ಯಡ್ರಾವಿ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆದ ಸಂದರ್ಭದಲ್ಲಿ, ಗುಡ್ಡದ ಮೇಲಿನ ಬೃಹತ್ ಬಂಡೆಗಳು ಉರುಳಿಬಿದ್ದಿವೆ. ಇದರಿಂದ ಒಂದು ಜೆಸಿಬಿ ಹಾಗೂ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿವೆ. ಬಂಡೆಗಲ್ಲುಗಳ ಮಧ್ಯೆ ಅಕ್ರಮ ಗಣಿಕಾರಿಗೆ ನಡೆಸಿದವರು ಸಿಕ್ಕಿಕೊಂಡ ಅನುಮಾನ ಇದೆ.
ರಾತ್ರಿ ಗುಡ್ಡದ ಪಕ್ಕದಲ್ಲಿ ಅಕ್ರಮವಾಗಿ ಗಣಿಗಾರಿಗೆ ನಡೆಯುತ್ತಿತ್ತು. ಏಕಾಏಕಿ ಬೃಹತ್ ಬಂಡೆಗಳು ಗುಡ್ಡದ ಮೇಲಿಂದ ಉರುಳಿದವು. ವಿಷಯ ತಿಳಿದ ಸವದತ್ತಿ ಅಗ್ನಿಶಾಸಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆಗ ನಜ್ಜುಗುಜ್ಜಾದ ವಾಹನಗಳು ಸಿಕ್ಕವು. ಆದರೆ, ಬಂಡೆಗಲ್ಲುಗಳ ಮಧ್ಯೆ ಯಾರಾದರೂ ಸಿಕ್ಕಿಕೊಂಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.