ಮಾಂಡ್ಯ : ಮಾವಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೌದು ಮಾವಿನ ಕಾಯಿ ಕೀಳಲು ಮರದ ಮೇಲೆ ಏರಿದ ಸಂಜಯ್ (16) ಮಾವಿನ ಮರದ ಮೇಲೆ ಮೃತಪಟ್ಟಿದ್ದಾನೆ. ಘಟನೆಯು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹಲಗೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.