ಹಾವೇರಿ : ಇಂದು ಹಾವೇರಿಯಲ್ಲಿ ಧಾರಾಕಾರ ಮಳೆಯಾಗಿದ್ದರಿಂದ 12 ವರ್ಷದ ಬಾಲಕ ಚರಂಡಿಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಸಂಬಂಧಪಟ್ಟ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್ ಮುಂಜೋಜಿ ಹಾಗೂ ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಸಸ್ಪೆಂಡ್ ಆಗಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರು ಆದೇಶ ಹೊರಡಿಸಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಅವರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಚರಂಡಿ ಕಾಲುವೆಯ ಮೇಲಿನ ಕಲ್ಲು ಮುಚ್ಚದೆ ನಿರ್ಲಕ್ಷ ವಹಿಸಲಾಗಿದೆ. ತೆರೆದ ಚರಂಡಿ ಮೋರಿಗೆ ಬಿದ್ದು 12 ವರ್ಷದ ಬಾಲಕ ನಿವೇದನ್ ಮೃತಪಟ್ಟಿದ್ದ.
ಪ್ರಕರಣ ಹಿನ್ನೆಲೆ?
ಇಂದು ಹಾವೇರಿಯಲ್ಲಿ ಘೋರ ದುರಂತವೊಂದು ನಡೆದಿದ್ದು, ರಸ್ತೆ ಕಾಣದೇ 12 ವರ್ಷದ ಬಾಲಕ ನಿವೇದನ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿತ್ತು. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ಈ ಘಟನೆ ನಡೆದಿತ್ತು.
12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕನಾಗಿದ್ದು, ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ.ಸದ್ಯ, ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವೈದ್ಯರು ಎಷ್ಟೇ ಹರಸಾಹಸ ಪಟ್ಟರೂ ಬಾಲಕನನ್ನು ಉಳಿಸಲು ಸಾಧ್ಯವಾಗಲಿಲ್ಲ.