ಕಲಬುರ್ಗಿ : ಕಲ್ಬುರ್ಗಿಯಲ್ಲಿ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿದ್ದಾನೆ. ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಬಳಿ ಬಾಲಕರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಪ್ರವಹಿಸಿ ಬಾಲಕ ಸಾವನಪ್ಪಿರುವ ಘಟನೆ ನಡೆದಿದೆ.
ನಗರದ ಬಸವ ನಗರದ ಕಮಲರಾಜ್ (14) ಎನ್ನುವ ಬಾಲಕ ಸಾವನಪ್ಪಿದ್ದಾನೆ. ರಸ್ತೆ ದಾಟುವ ವೇಳೆ ರಸ್ತೆ ಮಧ್ಯ ಅಳವಡಿಸಿದ್ದ ವಿದ್ಯುತ್ ಕಂಬದ ಬಳಿ ಹೋದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಕಬ್ಬಿಣದ ರಾಡಿಗೆ ಅಂಟಿಕೊಂಡಿದ್ದ ವಿದ್ಯುತ್ ತಂತಿ ಹಿಡಿದಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ವಿದ್ಯುತ್ ಪ್ರವಹಿಸಿ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಘಟನೆಗೆ ಸಂಬಂಧಿಸಿದ ಕಲಬುರ್ಗಿ ಪಾಲಿಕೆಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇದೀಗ ಸಾರ್ವಜನಿಕರು ಕಲ್ಬುರ್ಗಿ ಪಾಲಿಕೆಯ ನಿರ್ಲಕ್ಷತನಕ್ಕೆ ಬಾಲಕ ಸಾವಿನ ಪಿದ್ದಾನೆ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.