ಬೆಳಗಾವಿ : ತನ್ನ ಸ್ನೇಹಿತರ ಜೊತೆಗೆ ಈಜುಲು ತೆರಳಿದ್ದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘ್ವಾಡೆ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಗಣೇಶ್ ಸುತಾರ್ (15) ಎಂದು ತಿಳಿದುಬಂದಿದೆ.
ಮೃತ ಗಣೇಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಸ್ನೇಹಿತರ ಜೊತೆಗೆ ಈಜಲು ಕೆರೆಗೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಗಣೇಶನ ಮೃತದೇಹ ಹೊರತೆಗೆಯುತ್ತಿದ್ದಂತೆ ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.