ವಿಜಯಪುರ : ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಬಳಿ ಜಮೀನ್ ಒಂದರಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ತೆರೆದ ಬಾವಿಯಲ್ಲಿ ಬಾಲಕ ಸಾತ್ವಿಕ್ ಮುಜಗೊಂಡ ಎನ್ನುವ ಬಾಲಕನು ಆಟವಾಡುತ್ತಾ ಆಯತಪ್ಪಿ ತೆರೆದ ಕೊಳವೆಬಾವಿಯಲ್ಲಿ ಬಿದ್ದಿರುವ ಘಟನೆ ನಡೆದಿದೆ. ಸದ್ಯ ಬಾಲಕನನ್ನು ರಕ್ಷಿಸಲು ಇದೀಗ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಸೇರಿದಂತೆ ತಕ್ಷಣ ಘಟನಾಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.