ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಅವಶ್ಯಕವಾಗಿವಾಗಿದೆ. 300 ಕೋಟಿ ರೂ. ವೆಚ್ಚದಲ್ಲಿ, 80 ಎಕರೆ ಪ್ರದೇಶದಲ್ಲಿ ಬ್ರಹ್ಮೋಸ್ ಕ್ಷಿಪಣಿ ಘಟಕವನ್ನು ಸ್ಥಾಪಿಸಲಾಗಿದೆ ಎಂದರು.
#WATCH | Defence Minister Rajnath Singh says, "At the inauguration of BrahMos Integration & Testing Facility Center today, I feel delighted to speak with you. I wanted to attend in person. But you know why I couldn't come. Looking at the situation we are facing, it was important… pic.twitter.com/rlRSOXXfQZ
— ANI (@ANI) May 11, 2025
ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಘಟಕ ಉದ್ಘಾಟಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇಂದು ಲಕ್ನೋದಲ್ಲಿ ಉದ್ಘಾಟನೆಗೊಳ್ಳಲಿರುವ ಬ್ರಹ್ಮೋಸ್ ಸೌಲಭ್ಯವು ಒಂದು ವರ್ಷದಲ್ಲಿ 100 ಕ್ಷಿಪಣಿಗಳನ್ನು ಉತ್ಪಾದಿಸಲಿದೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷ ಮತ್ತು ಶನಿವಾರ ಕದನ ವಿರಾಮ ಘೋಷಣೆಯ ನಂತರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಸೌಲಭ್ಯವನ್ನು ಉದ್ಘಾಟಿಸಿದ್ದಾರೆ. ಇದು ಭಾರತದ ಮಿಲಿಟರಿ ಶಸ್ತ್ರಾಗಾರಕ್ಕೆ ಪ್ರಮುಖ ಉತ್ತೇಜನ ನೀಡುತ್ತದೆ. ಉದ್ಘಾಟನಾ ಸಮಾರಂಭವು ವರ್ಚುವಲ್ ಆಗಿ ನಡೆಯಲಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.