ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವದ ವೇಳೆ ಭಾರೀ ಅನಾಹುತವೊಂದು ತಪ್ಪಿದ್ದು, ಘಾಟಿ ಸುಬ್ರಹ್ಮಣ್ಯ ರಥೋತ್ಸವ ಸಂದರ್ಭದಲ್ಲಿ ರಥ ಎಳೆಯುವಾಗ ಚಕ್ರದ ಅಡಿಯಲ್ಲಿ ಮಹಿಳೆಯೊಬ್ಬಳು ಸಿಲುಕಿದ್ದಳು. ತಕ್ಷಣ ಪೊಲೀಸರು ಹಾಗೂ ಸಿಬ್ಬಂದಿಗಳು ಮಹಿಳೆಯನ್ನು ಚಕ್ರದಿಂದ ಎಳೆದುಕೊಂಡಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಘಟನೆ ಸಂಭಬಿಸಿದ್ದು ಘಾಟಿ ಸುಬ್ರಮಣ್ಯ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆಯೊಬ್ಬಳು ಸಿಲುಕಿದ್ದಳು. ಕೂಡಲೇ ಎಚ್ಚೆತ್ತು ಪೊಲೀಸ್ ಹಾಗೂ ಸಿಬ್ಬಂದಿ ಮಹಿಳೆಯನ್ನು ಪಕ್ಕಕ್ಕೆ ಎಳಿದುಕೊಂಡರು ಪಕ್ಕಕ್ಕೆ ಏಳದಿದ್ದರಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದಾಳೆ.
ಈ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಸರ್ಪ ದೋಷ ಪರಿಹಾರ ಸೇರಿದಂತೆ ವಿವಿಧ ರೀತಿಯ ನಾಗಾರಾಧನೆಗೆ ಇದು ಪ್ರಸಿದ್ದವಾಗಿದೆ.ಇತಿಹಾಸ ಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ಸಂಭ್ರಮದಿಂದ ಜರುಗಿದ್ದು, ಪುಷ್ಪ ಶುದ್ದ ಷಷ್ಟಿ ಹಿನ್ನಲೆ ಬ್ರಹ್ಮರಥೋತ್ಸವಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. 12 ಗಂಟೆಗೆ ಸುಭ್ರಹ್ಮಣ್ಯ ರಥವನ್ನ ಭಕ್ತಾದಿಗಳು ಎಳೆಯುವ ಮೂಲಕ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಯಿತು.