ಪಶ್ಚಿಮಬಂಗಾಳ : ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಟ್ರೈನಿ ವೈದ್ಯೇ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣ ದೇಶದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಇಂದು ಪಶ್ಚಿಮಬಂಗಾಳದ ದಕ್ಷಿಣ 24-ಪರಗಣ ಜಿಲ್ಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಿಳಿಬಂದಿದೆ.
ಹೌದು ಟ್ಯೂಶನ್‌ನಿಂದ ಮರಳುತ್ತಿದ್ದ ಬಾಲಕಿಯನ್ನು ದುಷ್ಕರ್ಮಿಗಳು ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.ಶುಕ್ರವಾರ ಸಂಜೆಯಿಂದ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಶನಿವಾರ ಮುಂಜಾನೆ ಜಯನಗರ ಪ್ರದೇಶದ ಜವುಗು ಭೂಮಿಯಿಂದ ಬಾಲಕಿಯ ಶವ ಪತ್ತೆಗಾಗಿದೆ.ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿದ್ದಾರೆ.
ಬಾಲಕಿ ಶವ ಪತ್ತೆ ಬಳಿಕ ಗುಂಪೊಂದು ಮಹಿಸ್ಮರಿ ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಹೊರಠಾಣೆ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದೆ. ಪೊಲೀಸ್ ಪೇದೆಗಳಿಗೆ ಠಾಣೆಯಿಂದ ಹೊರಹೋಗುವಂತೆ ಬಲವಂತ ಮಾಡಿದೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೂಡಿ ಹಾಕಲು ಯತ್ನಿಸಿದೆ. ಬಳಿಕ ಈ ಪ್ರದೇಶಕ್ಕೆ ಹೆಚ್ಚಿನ ಪೊಲೀಸ್ ಪಡೆಗಳನ್ನು ಕಳಿಸಲಾಗಿದ್ದು, ಗುಂಪನ್ನು ಹತ್ತಿಕ್ಕಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ ಸ್ಥಿತಿಯನ್ನು ನಿಯಂತ್ರಿಸಿವೆ.