ಹಾವೇರಿ : ರಾಜ್ಯದ ಹಲವೆಡೆ ವಕ್ಫ್ ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ. ಬೇರೆ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ಮಾಡುತ್ತಿದ್ದರೆ, ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು 32 ಜನರನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ನೋಂದಣಿಯಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಾವು ವಾಸವಿದ್ದ ಮನೆಗಳನ್ನು ಖಾಲಿ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ.
ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ. ವಕ್ಸ್ ಹೆಸರಿಗೆ ಆಸ್ತಿ ಮನೆಗಳನ್ನು ವರ್ಗಾಯಿಸಿಕೊಂಡು ಖಾಲಿ ಮಾಡಿಸುತ್ತಾರೆ ಎಂಬ ವದಂತಿಯಿಂದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಕೋಳ ಗ್ರಾಮದಲ್ಲಿ ತಡರಾತ್ರಿ ನಡೆದ ಗಲಾಟೆಯಲ್ಲಿ ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉದ್ರಿಕ್ತ ಗೋಪಿನಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದೆ. ಹಾಗಾಗಿ 32 ಜನರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.