ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವದ ದುರಂತ ಒಂದು ಸಂಭವಿಸಿದ್ದು ಜಾತ್ರೆಗೆ ಎಂದು ಕ್ರಮಕ್ಕೆ ಆಗಮಿಸಿದ್ದ 9 ವರ್ಷದ ಬಾಲಕಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬಿ.ದುರ್ಗ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಚಿತ್ರದುರ್ಗ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಮೈನಾ (9) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ.ಜಾತ್ರೆಗೆ ಎಂದು ಬಿ.ದುರ್ಗ ಗ್ರಾಮಕ್ಕೆ ಬಂದಿದ್ದ ವೇಳೆ ಈ ಒಂದು ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.