ಮೈಸೂರು: ಹೊಸ ವರ್ಷದ ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದು, ಈ ಮೂಲಕ ಸಾವನ್ನಪ್ಪಿದ ಕೈದಿಗಳ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.
ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಮತ್ತೊಬ್ಬ ಕೈದಿ ರಮೇಶ್ ಆರೋಗ್ಯ ಸ್ಥಿತಿಯು ಗಂಭೀರವಾಗಿದೆ ಎಂದು ತಿಳಿದುಬಂದಿದೆ.