ಬೆಂಗಳೂರು : ಸ್ಯಾಂಡಲ್ ವುಡ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ.
ಹೌದು ನಾಗರಬಾವಿಯ ತಮ್ಮ ನಿವಾಸದಲ್ಲಿ ಇಂದು ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆಟ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾಲದ ಸುಳಿಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ನಿನಾಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ವಿನೋದ್ ಮನೆಗೆ ಹಿಂತಿರುಗಿದ್ದರು ಎಂದು ವರದಿಯಾಗಿದೆ.