ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜಾಮೀನು ಕೋರಿ ನಟಿ ರನ್ಯಾ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.
ಹೌದು ಕಳೆದ 2 ದಿನಗಳ ಹಿಂದೆ ಈ ಕೋರ್ಟ್ ನಲ್ಲಿ ನಟಿ ರನ್ಯಾ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ರನ್ಯಾ ರಾವ್ ಜಾಮೀನು ಅರ್ಜಿ ಬಗ್ಗೆ ಇಂದು ಕೋರ್ಟ್ ಆದೇಶ ಪ್ರಕಟಿಸಲಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ. ವಾದ ಮತ್ತು ಪ್ರತಿವಾದವನ್ನು ಆಲಿಸಿದ ವಿಶೇಷ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು. ಹಾಗಾಗಿ ಇಂದು ಕೋರ್ಟ್ ನಿಂದ ಆದೇಶ ಹೊರಬೀಳಲಿದ್ದು, ರನ್ಯಾಗೆ ಜೈಲಾ ಇಲ್ಲ ಬೇಲಾ ಅಂತ ಕಾದು ನೋಡಬೇಕು.