ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ, ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಬೆಂಗಳೂರಿನಲ್ಲಿ ಪರೀಕ್ಷೆ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ದಂತ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸೌಮ್ಯ (19) ಎಂದು ತಿಳಿದುಬಂದಿದೆ. ಅಪಾರ್ಟ್ಮೆಂಟಿನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ದಂತ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಸೌಮ್ಯ 2ನೇ ವರ್ಷದಲ್ಲಿ ಓದುತ್ತಿದ್ದಳು.
ಪರೀಕ್ಷೆ ವಿಚಾರವಾಗಿ ವಿದ್ಯಾರ್ಥಿನಿ ಸೌಮ್ಯ ಭಯಗೊಂಡಿದ್ದಾಳೆ ಎನ್ನಲಾಗಿದೆ. ಈ ಹಿಂದೆಯೂ ವಿದ್ಯಾರ್ಥಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.