ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮೈಸೂರು ನಾಗನಹಳ್ಳಿ ಗ್ರಾಮದ ಎಸ್ ಶ್ರೇಯಸ್ ಎಂದು ತಿಳಿದುಬಂದಿದೆ. ಈತ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ ಓದುತ್ತಿದ್ದ. ಮೂವರು ಸ್ನೇಹಿತರ ಜೊತೆಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ.
ಮೂವರು ಸ್ನೇಹಿತರೊಂದಿಗೆ ತೆರಳಿದ ಶ್ರೇಯಸ್ ನನಗೆ ಈಜಲು ಬರುತ್ತದೆ ಎಂದು ನದಿಗೆ ಇಳಿದಿದ್ದ. ಈ ವೇಳೆ ಇಬ್ಬರು ಸ್ನೇಹಿತರು ನದಿ ದರದಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿನ ಸುಳಿಗೆ ಸಿಲುಕಿ ಶ್ರೇಯಸ್ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.