ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಕಾಲುವೆಯಲ್ಲಿ ಮೀನು ಹಿಡಿಯಲು ಹೋದಾಗಲೇ ಒಂದು ದುರಂತ ಸಂಭವಿಸಿದೆ.
ಹೌದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಐವರು ಮಕ್ಕಳು ನಾಪತ್ತೆಯಾಗಿದ್ದಾರೆ. ಧನುಷ್ (14 ಕಿರಣ್ (10) ಲೋಹಿತ್ (12) ಭುವನ್ (8) ಮತ್ತು ಲಕ್ಷ್ಮೀಶ (12) ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ.ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದ್ದು, ಮಕ್ಕಳಿಗೆ ಅಗ್ನಿಶಾಮಕ ದಳ ಸಿಬ್ಬಂದಿ ಇದೀಗ ಶೋಧ ನಡೆಸುತ್ತಿದ್ದಾರೆ