ಬೆಂಗಳೂರು : ಇಂದು ಸಾಹಸಸಿಂಹ ವಿಷ್ಟುವರ್ಧನ್ ಜನ್ಮದಿನ ಹಿನ್ನೆಲೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.
ಹೌದು, ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ನ್ಯಾಯಾಲಯ ಅನುಮತಿ ನೀಡದ ಕಾರಣ ಸಂಭ್ರಮಾಚರಣೆ ಬ್ರೇಕ್ ಹಾಕಲಾಗಿದೆ.
ಈ ಬಾರಿ ಅಭಿಮಾನ್ ಸ್ಡುಡಿಯೋದಲ್ಲಿ ಇರುವ ವಿಷ್ಣುವರ್ಧನ್ ಅವರ ಪುಣ್ಯಭೂಮಿಯಲ್ಲಿ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾಯುತ್ತಿದ್ದರು. ಅದಕ್ಕೆ ಅವಕಾಶ ನೀಡುವಂತೆ ಕೋರಿ ಹೈಕೋರ್ಟ್ಗೆ ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ರಿಟ್ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯನ್ನು ನ.4ಕ್ಕೆ ಮುಂದೂಡಲಾಗಿದೆ. ಹೀಗಾಗಿ ಅಭಿಮಾನ್ ಸ್ಟುಡಿಯೋ ಗೇಟ್ ಸುತ್ತ ಬ್ಯಾರಿಕೇಟ್ ಹಾಕಿ ನಿರ್ಬಂಧಿಸಲಾಗಿದೆ.