ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15 ಕ್ಕೆ ಮುಂದೂಡಿ ಆದೇಶಿಸಿದರು.
ವಿಚಾರಣೆ ಆರಂಭವಾದಾಗ ಹೈಕೋರ್ಟ್ ನ್ಯಾಯಾಧೀಶರು ಎಸ್ ಪಿ ಪಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದರು. ಬಳಿಕ ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶಿಸಿದರು. ಸದ್ಯ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.