ಮಂಡ್ಯ : 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಹೌದು ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿ ಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾಗಿದ್ದು, 1 ಲಕ್ಷ ಪಡೆಯುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಮಾಗನೂರು ಗ್ರಾಮದ ನಿವಾಸಿ ಶಂಕರ್ ನಿಂದ 8 ಲಕ್ಷ ಲಂಚಕ್ಕೆ ಮನೋಹರ್ ಬೇಡಿಕೆ ಇಟ್ಟಿದ್ದ. ದೂರದಾರ ಹಾಗೂ ಎಡಿಎಲ್ ಆರ್ ನಡುವಿನ ಜಾಗದ ವಿವಾದಕ್ಕೆ ಈ ವಿಚಾರವಾಗಿ ಮಧ್ಯಪ್ರವೇಶ ಮಾಡದಿರಲು 8 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಈ ವೇಳೆ 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾನೆ. ಸದ್ಯ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್ ನನ್ನ ವಶಕ್ಕೆ ಪಡೆದು ಲೋಕಾಯುಕ್ತಪಡಿಸಲು ವಿಚಾರಣೆ ನಡೆಸಿದ್ದಾರೆ.