ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐಎಸ್ ಅಧಿಕಾರಿ ಕೆ.ಶ್ರೀನಿವಾಸ ಅವರನ್ನು ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಬಾಣಂತಿಯರ ಸರಣಿ ಸಾವುಗಳು ಸಂಭವಿಸಿದ್ದವು. ಈ ಹಿನ್ನೆಲೆ ಇದೀಗ ಔಷಧ ನಿಯಂತ್ರಣ ಇಲಾಖೆಗೆ ಆಡಳಿತಾತ್ಮಕ ಮುಖ್ಯಸ್ಥರನ್ನು ನೇಮಕ ಮಾಡಿದ್ದು, ಮುಖ್ಯಸ್ಥರಾಗಿರುವಂತಹ ಕೆ ಶ್ರೀನಿವಾಸ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರಾಗಿರುವ ಕೆ. ಶ್ರೀನಿವಾಸ್ ಅವರಿಗೆ ಮುಂದಿನ ಆದೇಶದವರೆಗೂ ಶ್ರೀನಿವಾಸ್ ಅವರಿಗೆ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಅವರು ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.