ಆಂಧ್ರಪ್ರದೇಶ : ದೇಶದಲ್ಲಿ ಮತ್ತೊಂದು ಪೈಸಾಚಿತ ಕರ್ತ ನಡೆದಿದ್ದು ಮೂರನೇ ತರಗತಿಯ ಬಾಲಕಿಯ ಮೇಲೆ ಮೂವರು ಬಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿ ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ.
ಹೌದು ಆಂಧ್ರಪ್ರದೇಶದಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕರು ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ನಗರವೇ ಬೆಚ್ಚಿ ಬಿದ್ದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯೊಬ್ಬಳನ್ನು ಮೂವರು ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.
ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್ಮರಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೂವರು ಬಾಲಕರು ಸೇರಿ ಶಾಲಾ ರಜಾದಿನವಾದ ಭಾನುವಾರ ಈ ಕೃತ್ಯವೆಸಗಿದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದರೆ ಇಬ್ಬರು 6ನೇ ತರಗತಿ, ಇನ್ನೊಬ್ಬ ಬಾಲಕ 7ನೇ ತರಗತಿಯಲ್ಲಿ ಓದುತ್ತಿದ್ದ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಪಾರ್ಕ್ನಲ್ಲಿ ಆಟವಾಡುತ್ತಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಭಾನುವಾರ ದೂರು ದಾಖಲಿಸಿದ್ದರು.
ಮುಚ್ಚುಮರ್ರಿ ಪಾರ್ಕ್ನಲ್ಲಿ ಪೊಲೀಸರು , ಪೋಷಕರೆಲ್ಲರೂ ಹುಡುಕಾಟ ನಡೆಸಿದ್ದರು, ಆದರೂ ಬಾಲಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಸ್ನಿಫರ್ ಡಾಗ್ನ್ನು ಕರೆದುಕೊಂಡು ಬರಲಾಯಿತು. ನಾಯಿಯ ಸುಳಿವು ಪೊಲೀಸರನ್ನು ಮೂವರು ಅಪ್ರಾಪ್ತ ಬಾಲಕರ ನಿವಾಸಗಳಿಗೆ ಕರೆದೊಯ್ಯಿತು.
8-yr-old girl, class 3 student, allegedly raped, murdered by 3 minor boys, her seniors in school, two of them 12 yrs, in class VI, & a 13-yr-old in class 7; sniffer dog led police to homes of accused who reportedly asked her to play with them, raped, threw body in canal #Nandyala pic.twitter.com/CDC5i0Zdab
— Uma Sudhir (@umasudhir) July 11, 2024