ಲಂಡನ್ : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಓದುತ್ತಿದ್ದ 33 ವರ್ಷದ ಭಾರತೀಯ ವಿದ್ಯಾರ್ಥಿನಿ ಕಳೆದ ವಾರ ಲಂಡನ್‌ನಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಡಾ.ಎಸ್.ಪಿ. ಕೊಚ್ಚರ್ ಅವರ ಮಗಳು ಚೈಸ್ತಾ ಕೊಚಾರ್ ಎಂದು ಗುರುತಿಸಲಾಗಿದೆ.
ಮಾರ್ಚ್ 19 ರಂದು ಚೈಸ್ತಾ ಕೊಚಾರ್ ಮನೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಕಸದ ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ವೇಳೆ ಅವರಿಗಿಂತ ಸೈಕಲ್ ನಲ್ಲಿ ಮುಂದಿದ್ದ ಪತಿ ಪ್ರಶಾಂತ್ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಬದುಕಲು ಸಾಧ್ಯವಾಗಲಿಲ್ಲ.
ಚೈಸ್ತಾ ಕೊಚ್ಚರ್ ಹರಿಯಾಣದ ಗುರುಗ್ರಾಮ್ ನಿವಾಸಿಯಾಗಿದ್ದು, ದೆಹಲಿ ವಿಶ್ವವಿದ್ಯಾಲಯ, ಅಶೋಕ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ಮತ್ತು ಚಿಕಾಗೋ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಉನ್ನತ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ಸೆಪ್ಟೆಂಬರ್ 2023 ರಲ್ಲಿ ಲಂಡನ್‌ಗೆ ತೆರಳಿದ್ದರು ಎಂದು ವರದಿಯಾಗಿದೆ.