ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಣಿಕೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಗQನೆ ನಡೆದಿದೆ.
ಕೋಲಾರ ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೇಣುಬಿಗಿದುಕೊಂಡು ಲಕ್ಷ್ಮಣ್ ಹಾಗೂ ಮಾಲಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಣ್ ಆಟೋ ಚಾಲಕನಾಗಿದ್ದು, ಪತ್ನಿ ಮಾಲಾಶ್ರೀ ಅಕ್ಷರ ದಾಸೋಹದ ಸಹಾಯಕಿಯಾಗಿದ್ದರು. ದಂಪತಿ ಸಾವಿಗೆ ಕಾರಣ ತಿಳಿದುಬಂದಿಲ್ಲ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.