ರಾಮನಗರ : ಎಪಿಎಂಸಿ ಕಾರ್ಯದರ್ಶಿ ಹಾಗೂ ಸೆಕ್ಯೂರಿಟಿ ಗಾರ್ಡ್ ಇಬ್ಬರು,15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಹೌದು ಚನ್ನಪಟ್ಟಣ ಎಪಿಎಂಸಿ ಕಾರ್ಯದರ್ಶಿ ಸೆಕ್ಯೂರಿಟಿ ಗಾರ್ಡ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 15 ಸಾವಿರ ರೂಪಾಯಿ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚನ್ನಪಟ್ಟಣ ಎಪಿಎಂಸಿ ಕಾರ್ಯದರ್ಶಿ ಶಶಿಕಲಾ ಹಾಗೂ ಸೆಕ್ಯೂರಿಟಿ ಗಾರ್ಡ್ ಕೃಷ್ಣಮೂರ್ತಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.
ಮಾವಿನ ಮಂಡಿಗೆ ಲೈಸೆನ್ಸ್ ನೀಡಲು 15,000 ಲಂಚ ಸ್ವೀಕರಿಸುತ್ತಿದ್ದರು. ರೆಹಮತ್ ಅಲಿ ಎನ್ನುವ ವ್ಯಕ್ತಿಯಿಂದ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಳಗೆ ಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.