ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲೆ 2022 ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮಂಡ್ಯದ ಬಿಜೆಪಿ ಕಾರ್ಯಕರ್ತರನ್ನು ಇದೀಗ ಬಂಧಿಸಿದೆ ಎಂದು ತಿಳಿದುಬಂದಿದೆ.
ಮಂಡ್ಯದ ಪಶ್ಚಿಮಠಾಣೆ ಪೊಲೀಸರಿಂದ ಬಿಜೆಪಿ ಕಾರ್ಯಕರ್ತ ರವಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು 2022 ರಲ್ಲಿ ಮಂಡ್ಯದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬಿಜೆಪಿ ಕಾರ್ಯಕರ್ತ ರವಿ ಘೋಷಣೆ ಕೂಗಿದ್ದಾನೆ. ಈ ಸಂಬಂಧ ಇದೀಗ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ರವಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
2022 ರಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವ ಪ್ರಧಾನಿ ಮೋದಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದರು ಈ ಕುರಿತಂತೆ ಪ್ರಧಾನಿ ಮೋದಿ ವಿರುದ್ಧ ಅವಹೇಳನ ಹೇಳಿಕೆ ಖಂಡಿಸಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪಾಕಿಸ್ತಾನ ಜಿಂದಾಬಾದ್ ಎಂದು ಬಿಜೆಪಿ ಕಾರ್ಯಕರ್ತ ರವಿ ಘೋಷಣೆ ಕೂಗಿದ್ದಾನೆ.ಈ ವೇಳೆ ರವಿ ಬಾಯಿ ಮುಚ್ಚಿದ ಕಾರ್ಯಕರ್ತ ಅರವಿಂದ. ಎರಡು ವರ್ಷಗಳ ನಂತರ ರವಿ ವಿರುದ್ಧ ಕಾಂಗ್ರೆಸ್ ನಿಂದ ದೂರು ದಾಖಲಾಗಿದೆ.
ದೂರು ದಾಖಲಿಸಿದ್ಧ ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್. ಇದೀಗ ಕುಮಾರ್ ದೂರಿನ ಅನ್ವಯ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಎ.1 ಆರೋಪಿ ಆರಾಧ್ಯ ಎ.2 ಆರೋಪಿ ರವಿ ಮತ್ತಿತರರ ವಿರುದ್ಧ FIR ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
BREAKING : ಕೋಲಾರದಲ್ಲಿ ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ : ಅತ್ಯಾಚಾರ ಶಂಕೆ
ಈ ಮೂಲಕ ಕಾಂಗ್ರೆಸ್ ದೇಶದ ರಾಜಕಾರಣ ಮಾಡುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಹೌದು ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾದ ನಾಲ್ಕು ಸ್ಥಾನಗಳು ಹೇಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು ಈ ವೇಳೆ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕಿದ್ದರು. ನಂತರ ಅರಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ಚಟಾಪಟಿ ನಡೆದ ನಂತರ ನಿನ್ನ ಎಸ್ಎಸ್ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ದೃಢವಾಗಿದೆ.
ಪಾಕ್ ಪರಮಾಣು ಕಾರ್ಯಕ್ರಮಕ್ಕೆ ಉಪಕರಣಗಳನ್ನು ಸಾಗಿಸುತ್ತಿದ್ದ ಶಂಕಿತ ಹಡಗು ಮುಂಬೈನಲ್ಲಿ ವಶ: DRDO ವರದಿ
ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಂಧಿಸಿದ್ದಾರೆ ಅಲ್ಲದೆ ಇದೀಗ ಆರೋಪಿಗಳನ್ನು ಪೊಲೀಸರ ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇತ್ತ ಮಂಡ್ಯ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮೇಲ್ನೋಟಕ್ಕೆ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಂಡುಬರುತ್ತದೆ.