ಕಲಬುರ್ಗಿ : ಕಲುಷಿತ ನೀರು ಸೇವಿಸಿ ಸುಮಾರು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಎಂಬ ಈ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸದೆ, ಗ್ರಾಮಕ್ಕೆ ನೀರು ಪೂರೈಸಲಾಗುತ್ತಿತ್ತು. ಇದರಿಂದ, ಸುಮಾರು 30ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ಕುರಿತಂತೆ ಆಳಂದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.