ಮಂಡ್ಯ : ಕಳೆದ ಕೆಲವು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿ ನಾಲ್ವರು ಮಕ್ಕಳೊಂದಿಗೆ ತಾಯಿಯೊಬ್ಬಳು ಆಲಮಟ್ಟಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಮಂಡ್ಯದಲ್ಲೂ ಕೂಡ ಅಂತಹದೇ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ಜೊತೆಗೆ ತಾಯಿಯೊಬ್ಬಳು ವಿಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ.
ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ನಿಶಿಕಾ (8) ರಾಘವ್ (2) ನಿರುಪಾಲಾಗಿರುವ ಮಕ್ಕಳು ಎಂದು ತಿಳಿದುಬಂದಿದೆ. ನದಿಗೆ ಹಾರುವುದನ್ನು ಕಂಡು ಸ್ಥಳೀಯರು ತಕ್ಷಣ ತಾಯಿಯನ್ನು ರಕ್ಷಿಸಿದ್ದಾರೆ.ನೀರಿನ ಸೆಳೆತ ಹೆಚ್ಚಿದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳು ಸದ್ಯ ನೀರು ಪಾಲಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪಾಂಡವಪುರದ ವಿದ್ಯಾ ಎನ್ನುವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಗಳು ಶಾಲೆಯಿಂದ ಬಂದ ಬಳಿಕ ತಾಯಿ ವಿದ್ಯಾ ನಾಲೆಯ ಬಳಿ ಇಬ್ಬರು ಮಕ್ಕಳನ್ನು ಕರೆ ತಂದಿದ್ದಾಳೆ.
ನೀರು ಪಾಲಾದ ಮಕ್ಕಳಿಗಾಗಿ ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದಾರೆ. ವಿದ್ಯಾಪತಿ ಚಿಕ್ಕನಾಯಕನಹಳ್ಳಿಯಲ್ಲಿ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.