ಹಾಸನ : ಹಾಸನದಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಹಾಸನದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇಬ್ಬರನ್ನು ನ್ಯಾಯಾಂಗ ಬಂದನಕ್ಕೆ ನೀಡಿ ಇದೀಗ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪ ಕುರಿತಂತೆ ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.