ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸರ್ಕಾರಕ್ಕೆ ತನಿಖಾ ತಂಡ ಮನವಿ ಮಾಡಿದೆ.
ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.