ಬೆಂಗಳೂರು : ಶ್ವೇತಗೌಡ ಚಿನ್ನದ ವ್ಯಾಪಾರಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆಗೆ ಹಾಜರಾಗಿದ್ದಾರೆ.
ಪುಲಕೇಶಿ ಉಪನಗರದ ಎಸಿಪಿ ಕಚೇರಿಗೆ ವರ್ತೂರು ಪ್ರಕಾಶ್ ಆಗಮಿಸಿದ್ದು, ಎಸಿಪಿ ಗಿರೀಶ್ ವರ್ತೂರು ಪ್ರಕಾಶ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿ ರೂ.ಗೆ ಹೆಚ್ಚು ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ವರ್ತೂರು ಪ್ರಕಾಶ್ ಸೇರಿದಂತೆ ಹಲವು ಗಣ್ಯರ ಹೆಸರು ಬಳಸಿಕೊಂಡು ಚಿನ್ನ ಖರೀದಿಸಿ ಕೋಟ್ಯಾಂತರ ರೂ. ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಕೇಶಿ ನಗರದ ಉಪ ವಿಭಾಗದ ಪೊಲೀಸರು ಬಂಧಿಸಿದ್ದು, ಇದೀಗ ವರ್ತೂರ್ ಪ್ರಕಾಶ್ ಅವರ ವಿಚಾರಣೆ ನಡೆಸಲಾಗುತ್ತಿದೆ.