ಮಂಡ್ಯ : ಮಂಡ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾಫ್ಟ್ ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ ನಡೆದಿದೆ.
ಮೃತ ಇಂಜಿನಿಯರ್ ಅನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಎಂದು ತಿಳಿದುಬಂದಿದೆ. ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.