ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭೀಮಾ ನದಿಯಲ್ಲಿ ಈಜಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದಲ್ಲಿ ನಡೆದಿದೆ.
ಮಾರ್ಚ್ 21ರಂದು ಎಸ್‌ಎಸ್‌ಎಲ್‌ಸಿ ಇಂಗ್ಲಿಷ್ ಭಾಷೆಯ ಪರೀಕ್ಷೆ ಬರೆದು ಸೋಮವಾರದವರೆಗೆ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದ.ಭಾನುವಾರ ಸ್ನೇಹಿತರ ಜೊತೆ ಈಜಲು ಗ್ರಾಮದ ಸಮೀಪದ ಭೀಮಾ ನದಿಗೆ ತೆರಳಿದ್ದ. ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯದಿಂದ ಸೋಮವಾರ ಸಂಜೆ ನದಿಯಿಂದ ಮೃತದೇಹ ಹೊರ ತೆಗೆಯಲಾಯಿತು. ಸ್ಥಳಕ್ಕೆ ಪಿಎಸ್‌ಐ ಚಿದಾನಂದ ಸವದಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.