ಮೈಸೂರು : ಮೈಸೂರು ಕಾರಾಗೃಹದಲ್ಲಿ ಕೈದಿಗಳು ಎಸ್ಸೆನ್ಸ್ ಸೇವಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಮೇಶ್ ಎನ್ನುವ ಮೂರನೇ ಕೈದಿ ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.ಅಸ್ವಸ್ಥಗೊಂಡಿದ್ದ ಮತ್ತೊಬ್ಬ ಕೈದಿ ರಮೇಶ್ ಕೂಡ ಇದೀಗ ಸಾವನ್ನಪ್ಪಿದ್ದಾನೆ. ಆ ಮೂಲಕ ಹೊಸ ವರ್ಷಚಾರಣೆ ವೇಳೆ ಎಸೆನ್ಸ್ ಸೇವಿಸಿದ್ದ ಮೂವರು ಕೈದಿಗಳು ಇದೀಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮೂರು ಕೈದಿಗಳನು, ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಇದೀಗ ಮತ್ತೊಬ್ಬ ಕೈದಿ ರಮೇಶ್ ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.