ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಭಾಷಣ ಮಾಡಿದ ಮೌಲ್ವಿ ಮಫ್ತಿ ಮುಸ್ತಾಕ್ ನನ್ನು ಇಂದು ಪೊಲೀಸರು ಮೈಸೂರಿನ 2ನೇ ಹೆಚ್ಚುವರಿ ನ್ಯಾಯಕ್ಕೆ ಹಾಜರುಪಡಿಸಿದ್ದರು ಈ ವೇಳೆ ಜಡ್ಜ್ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಅದೇಶಿಸಿದರು.
ಮೌಲ್ವಿ ಮುಸ್ತಾಕ್ ನನ್ನು ಎಂದು ಪೊಲೀಸರು 11 ದಿನಗಳ ಬಳಿಕ ಅರೆಸ್ಟ್ ಮಾಡಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಲು ಈ ಒಂದು ಮೌಲ್ವಿಯ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು. 10 ದಿನಗಳಾದರೂ ಆರೋಪಿಯನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ಧ ಕಿಡಿಕಾರಿದ್ದರು. ಇಂದು ಮೌಲ್ವಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು.
ಅರೆಸ್ಟ್ ಮಾಡಿದ ಬಳಿಕ ಮೈಸೂರಿನ 2ನೇ ಸೇಷನ್ಸ್ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಲ್ವಿ ಮುಫ್ತಿ ಮುಸ್ಟಾಕ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.