ಬೆಳಗಾವಿ : ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದರಿಂದ ಮನನೊಂದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹೌದು ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಕೃಷ್ಣ ನದಿಗೆ ಹಾರಿ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ತಾಯಿ ಶಾರದ ಹಾಗೂ ಮಕ್ಕಳಾದ ಅಮೃತ, ಆದರ್ಶ ಸಾವನಪ್ಪಿದ್ದಾರೆ. ಆದರೆ ಘಟನೆಯಲ್ಲಿ ಅನುಷ್ಕಾ ಡಾಲೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪತಿ ಅಶೋಕ್ ಡಾಲೆ ಕಿರುಕುಳಕ್ಕೆ ಬೇಸತ್ತು ತಾಯಿ ಶಾರದಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಿತ್ಯ ಕುಡಿದು ಬಂದು ಪತಿ ಅಶೋಕ್ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಪತ್ನಿ ಶಾರದ ಋಷಿ ಹೋಗಿದ್ದಳು ಈ ವೇಳೆ ಚಿಂಚಲಿ ಗ್ರಾಮದ ಹೊರವಲಯದಲ್ಲಿರುವ ಕೃಷ್ಣಾ ನದಿಗೆ ತನ್ನ ಮೂವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ದುರಾದೃಷ್ಟ ಘಟನೆಯಲ್ಲಿ ತಾಯಿ ಇಬ್ಬರು ಮಕ್ಕಳು ಶ್ರಾವಣ ಬಿದ್ದು ಮತ್ತೋರ್ವ ಮಗಳನ್ನು ತಡೆಯುವ ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಈ ಕುರಿತು ಚಿಂಚಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಶೋಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.