ಬೆಂಗಳೂರು : ಗ್ಯಾರಂಟಿ ಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ರಾಜ್ಯ ಮಹಿಳಾ ಆಯೋಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿತ್ತು. ಇದೀಗ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು ರಾಜ್ಯ ಮಹಿಳಾ ಆಯೋಗ ನೀಡಿದ ನೋಟಿಸ್ ಗೆ ಇದೀಗ ಹೈಕೋರ್ಟ್ ನೀಡಿದೆ ಎಂದು ತಿಳಿದುಬಂದಿದೆ.
ದೂರುಗಳು ಇಲ್ಲದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ .ಸೇ, 7ಗೆ ವಿರುದ್ಧವಾಗಿ ಮಹಿಳಾ ಆಯೋಗದ ಅಧ್ಯಕ್ಷೆ ನೋಟಿಸ್ ನೀಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪರ ವಕೀಲ ಎವಿ ನಿಶಾಂತ್ ವಾದ ಮಂಡಿಸಿದರು.
ಕಾರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿಲ್ಲ ಸಮನ್ಸ್ ನೀಡಿಲ್ಲ ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾ ಎಂ ನಾಗ ಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿತು.ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌದರಿಗೆ ಇದೀಗ ಹೈಕೋರ್ಟ್ ನೋಟಿಸ್ ನೀಡಿದೆ.
ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಇತ್ತೀಚಿಗೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿತ್ತು. ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಕುಮಾರಸ್ವಾಮಿ ಅವರು ಧಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು.ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದು ಅದಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ.
HDK ಹೇಳಿದ್ದೇನು?
ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಮಾತನಾಡಿ , ‘ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗಿತ್ತು.