ಬೆಂಗಳೂರು : ಕಳೆದ ವರ್ಷ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಟಿ ರವಿ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದರು. ಈ ಪ್ರಕರಣವನ್ನು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಲಾಗಿದೆ. ಆರೋಪಿಸಿದ ಪದ ಉಚ್ಚರಿಸಿದ್ದರೆ, ಅದು ಮಹಿಳೆಯ ಘನತೆಗೆ ಹಾನಿ ಉಂಟಾಗುತ್ತದೆ ಇದು ಶಾಸನ ಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.